ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಪುತ್ತೂರಿನ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.15. ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರೋರ್ವರು ಮೃತಪಟ್ಟ ಘಟನೆ ಪುತ್ತೂರು ಹೊರವಲಯದ ನೆಹರುನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ, ಪುತ್ತೂರು ನಗರದ ಎಂ.ಟಿ. ರಸ್ತೆಯ ಮಹಮ್ಮಾಯಿ ದೇವಸ್ಥಾನದ ಬಳಿ ಶ್ರೀ ದುರ್ಗಾ ಕೀ ಮತ್ತು ಸ್ಟವ್ ರಿಪೇರಿ ಅಂಗಡಿ ಮಾಲಕ ರವೀಂದ್ರ 60) ಎಂದು ಗುರುತಿಸಲಾಗಿದೆ. ರವೀಂದ್ರ ಅವರು ಮಂಗಳವಾರ ರಾತ್ರಿ ನೆಹರು ನಗರ ಕಡೆಯಿಂದ ಪುತ್ತೂರು ಪೇಟೆ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಬೈಕ್ ನಡುವೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರು ನಗರದ ಮಾಸ್ಟರ್ ಪ್ಲಾನರಿ ಮುಂಭಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರವೀಂದ್ರ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

Also Read  ಮಳೆಯಿಂದ ಮನೆ ಕಳಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ➤ ಸಿಎಂ ಬೊಮ್ಮಾಯಿ ಘೋಷಣೆ

 

 

error: Content is protected !!
Scroll to Top