(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1.36 ಕೋಟಿ ರೂ. ಮೌಲ್ಯದ ಚಿನ್ನನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ ತಪಾಸಣೆ ನಡೆಸಿದಾಗ 24 ಕ್ಯಾರೆಟ್‌ನ ಸುಮಾರು 964 ಗ್ರಾಂ ತೂಕದ ಚಿನ್ನವನ್ನು ಗುದನಾಳದಲ್ಲಿ ಕ್ಯಾಪ್ಸೂಲ್ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಇನ್ನೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಮಹಿಳೆಯಿಂದ 86,89,440 ರೂ. ಮೌಲ್ಯದ 1.684 ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈಕೆ ಒಳವಸ್ತ್ರ ಮಾದರಿಯ ಬಟ್ಟೆಯಲ್ಲಿ ಹಾಗೂ ಸ್ಯಾನಿಟರಿ ಪ್ಯಾಡ್ ನಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದಳು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.