ಪುತ್ತೂರು: ಕೋಳಿ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಅತ್ಯಾಚಾರ ➤ ವೀಡಿಯೋ ಮಾಡಿ ಮಹಿಳೆಯ ಪತಿಗೆ ಕಳುಹಿಸಿದ ಆರೋಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.15. ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿದ್ದ ಮಹಿಳೆಯ ಮೇಲೆ ಫಾರ್ಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿಯೋರ್ವ ಅತ್ಯಾಚಾರಗೈದಿದ್ದಲ್ಲದೆ ವಿಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿರುವ ಬಗ್ಗೆ ಸಂಪ್ಯ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.

ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿರುವ ಕೋಳಿ ಫಾರ್ಮ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮ್ಮರ್ ಎಂಬಾತ ಅಲ್ಲೇ ಕೆಲಸಕ್ಕೆ ಬರುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರಗೈದ ಬಳಿಕ ವಿಡಿಯೋ ಚಿತ್ರಿಕರಿಸಿ ಮಹಿಳೆಯ ಪತಿಗೆ ಕಳುಹಿಸಿದ್ದಾನೆ ಎನ್ನಲಾಗಿದೆ. ಮೇ 5 ರಂದು ಕೃತ್ಯ ನಡೆದಿದ್ದು, ಆರೋಪಿಯು ಜೀವ ಬೆದರಿಕೆ ಹಾಕಿದ್ದ ಕಾರಣ ಮಂಗಳವಾರದಂದು ಮಹಿಳೆಯು ಠಾಣೆಗೆ ದೂರು ನೀಡಿದ್ದಾರೆ.

Also Read  ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ...❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ

 

 

error: Content is protected !!
Scroll to Top