ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ ➤ ಅಪರಿಚಿತ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ತುಮಕೂರು, ಜೂ.15. ದಲಿತ ಮುಖಂಡರೋರ್ವರನ್ನು ಹಾಡಹಗಲೇ ಅಪರಿಚಿತ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಬುಧವಾರ ಅಪರಾಹ್ನ ನಡೆದಿದೆ.

ಮೃತ ವ್ಯಕ್ತಿಯನ್ನು ದಲಿತ ಮುಖಂಡ ಜಿ.ಸಿ ನರಸಿಂಹಮೂರ್ತಿ (50) ಎಂದು ಗುರುತಿಸಲಾಗಿದೆ. ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನರಸಿಂಹಮೂರ್ತಿಯವರು ಕುರಿಮೂರ್ತಿ ಎಂದೇ ಪರಿಚಿತರಾಗಿದ್ದರು. ಬುಧವಾರ ಅಪರಾಹ್ನ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಎದುರಿನ ಟೀ ಶಾಪ್ ಬಳಿ ನಿಂತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Also Read  7ನೇ ವೇತನ ಮಧ್ಯಂತರ ವರದಿ ಪಡೆದು ವೇತನ ಮತ್ತು ಭತ್ಯೆಗಳ ಪರಿಷ್ಕರಣೆ     ➤  ಇಂದು ಸಿಎಂ ಬೊಮ್ಮಾಯಿ ಘೋಷಣೆ

 

 

 

error: Content is protected !!
Scroll to Top