ಪುತ್ತೂರು: ಹಿತ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ಖಾಸಗಿ ಆಸ್ಪತ್ರೆಯಲ್ಲಿನ ಬ್ಯಾಟರಿ ಕದ್ದೊಯ್ದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.

 

ಇಲ್ಲಿನ ಹಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಜನರೇಟರ್ ಗೆ ಅಳವಡಿಸಿದ್ದ ಬ್ಯಾಟರಿಯನ್ನು ಯಾರೋ ಅಪರಿಚಿತ ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ಬಂದು ಕದ್ದೊಯ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆಸ್ಪತ್ರೆಯಲ್ಲಿ ಕರೆಂಟ್ ಹೋದ ಸಂದರ್ಭ ಜನರೇಟರ್ ಚಾಲು ಆಗದೇ ಇದ್ದು, ಪರಿಶೀಲನೆ ನಡೆಸಿದಾಗ ಬ್ಯಾಟರಿ ಕಳವಾದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ➤ ರಕ್ತದಾನ ಶಿಬಿರ

 

error: Content is protected !!
Scroll to Top