ನಾಳೆ (ಜೂ.18) ದ್ವಿತೀಯ ಪಿಯುಸಿ ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.17. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಜೂನ್ 18 ರಂದು ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಎಪ್ರಿಲ್ 22ರಿಂದ ಮೇ 18ರವರೆಗೆ ನಡೆದಿದ್ದು, ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ ಎಂದವರು ತಿಳಿಸಿದ್ದಾರೆ.

Also Read  ಪುತ್ತೂರು ತಹಶೀಲ್ದಾರ್ ನೇತೃತ್ವದ ಪ್ರವಾಹ ರಕ್ಷಣಾ ತಂಡದ ಗೃಹರಕ್ಷಕರಿಂದ ಶಾಲೆಯ ಮರದ ಗೆಲ್ಲುಗಳ ತೆರವು

 

error: Content is protected !!
Scroll to Top