ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಬಸ್ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 21. ಕೇರಳ ರಸ್ತೆ ಸಾರಿಗೆಯ ಮಲಬಾರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಮಂಗಳವಾರದಂದು ಮಧ್ಯಾಹ್ನ ಸಂಭವಿಸಿದೆ.

ಕಾಸರಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಬಸ್ಸು ಮಾವಿನಕಟ್ಟೆ ಬಳಿ ತಲುಪುದಿದ್ದಂತೆಯೇ ಮತ್ತೊಂದು ವಾಹನಕ್ಕೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದೆ. ಪರಿಣಾಮ ಚಾಲಕ ಸೇರಿದಂತೆ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Also Read  ದ. ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ➤ ಜಿಲ್ಲಾ ಮಟ್ಟದ ಹಾಗೂ ವಲಯ ಮಟ್ಟದ ಶಿಕ್ಷಕರ ದಿನಾಚರಣೆ

error: Content is protected !!