?? Breaking News ಸಮ್ಮರ್‌ಶಾಟ್ ವೇಳೆ ಬೆನ್ನುಮೂಳೆಗೆ ಪೆಟ್ಟು ➤ ನಟ ದಿಗಂತ್ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಗೋವಾ, ಜೂ. 21. ಸ್ಯಾಂಡಲ್ ವುಡ್ ನಟ ದಿಗಂತ್ ಗೆ ಬೆನ್ನು ಮೂಳೆಗೆ ಬಲವಾದ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಕುಟುಂಬಸ್ಥರೊಂದಿಗೆ ಗೋವಾ ಪ್ರವಾಸದಲ್ಲಿದ್ದ ನಟ ದಿಗಂತ್, ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ತೆಗೆಯುತ್ತಿದ್ದ ವೇಳೆ ಬೆನ್ನುಮೂಳೆಗೆ ಬಲವಾದ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ದಿಗಂತ್ ಅವರಿಗೆ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

Also Read  ಕೈಕಂಬ: ಕೋಟೆಸಾರ್ ಬಳಿಯಿದ್ದ ಕಬ್ಬಿನ ಹಾಲಿನ ಯಂತ್ರ ಎಗರಿಸಿದ ಖದೀಮರು

error: Content is protected !!
Scroll to Top