ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ಗರ್ಭದಲ್ಲೇ ಬಿಟ್ಟ ಸಿಬ್ಬಂದಿ..!!

(ನ್ಯೂಸ್ ಕಡಬ) newskadaba.com ಪಾಕಿಸ್ತಾನ, ಜೂ. 22. ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೇ ಬಿಟ್ಟ ಆತಂಕಕಾರಿ ಘಟನೆ ಪಾಕಿಸ್ತಾನ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದೆ.


ಮಹಿಳೆಯೋರ್ವರು ಹೆರಿಗೆಗಾಗಿ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭ ಅಲ್ಲಿ ವೈದ್ಯರು ಇಲ್ಲದ ಕಾರಣ ಹೆರಿಗೆ ಮಾಡಿಸಿ ಅನುಭವವೇ ಇಲ್ಲದ ಆರ್‌ಎಚ್‌ಸಿ ಸಿಬಂದಿಯು ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದಲ್ಲೇ ಬಿಟ್ಟಿದ್ದಾರೆ. ಮಹಿಳೆಯು ಪ್ರಾಣಾಪಾಯದಿಂದ ನರಳಾಡಿದಾಗ ಚಿಕಿತ್ಸೆಗೆ ಯಾವುದೇ ಸೌಲಭ್ಯವಿಲ್ಲದ ಕಾರಣ ಕೊನೆಗೆ ಆಕೆಯನ್ನು ಯೂನಿವರ್ಸಿಟಿ ಆಫ್ ಮೆಡಿಕಲ್ ಅಂಡ್ ಹೆಲ್ತ್ ಸೈನ್ಸಸ್ ಗೆ ಕರೆ ತಂದಿದ್ದು, ಈ ವೇಳೆ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ವೈದ್ಯರು ನವಜಾತ ಶಿಶುವಿನ ತಲೆಯನ್ನು ಹೊರ ತೆಗೆದು ತಾಯಿಯ ಜೀವವನ್ನು ಉಳಿಸಿದ್ದಾರೆ ಎನ್ನಲಾಗಿದೆ.

Also Read  ಮಂಗಳೂರು: ಮುಡಿಪು ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿ..! ➤ ಪೊಲೀಸರಿಗೆ ಒಪ್ಪಿಸಿದ ಹಿಂದೂ ಜಾಗರಣಾ ವೇದಿಕೆ

error: Content is protected !!
Scroll to Top