ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ..! ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 23. ಆಟೋ ರಿಕ್ಷಾವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಗುರುವಾರದಂದು ಬೆಳಗ್ಗೆ ಸಂಭವಿಸಿದೆ.

 

ಸೇಡಿಯಾಪು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಚಾಲಕ ಸೇಡಿಯಾಪು ನಿವಾಸಿ ಶಿವಪ್ಪ ಎಂಬವರಿಗೆ ಗಾಯವಾಗಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top