ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 23. ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿಯ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ಗುರುವಾರದಂದು ನಡೆದಿದೆ.

ಮೃತ ಬಾಲಕಿಯನ್ನು ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಎಂದು ಗುರುತಿಸಲಾಗಿದೆ. ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಈಕೆಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗಿತ್ತಾದರೂ, ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

 

Scroll to Top