ಕಡಬ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಥಳಿತ ➤ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಕಡಬ, ಜೂ. 24. ಇಲ್ಲಿನ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರೋರ್ವರು ಥಳಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ವಿದ್ಯಾರ್ಥಿಗಳು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರದಂದು ನಡೆದಿದೆ.

 

ಎಂಟನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಗೆ ಈ ಶಾಲೆಯ ಶಿಕ್ಷಕ ಖಾದರ್ ಎಂಬವರು ಕೆನ್ನೆಗೆ ಥಳಿಸಿದ್ದರಿಂದ ವಿದ್ಯಾರ್ಥಿಗಳ ಕೆನ್ನೆ ಊದಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಇದೀಗ ಶಿಕ್ಷಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಉಪ ಪ್ರಾಂಶುಪಾಲೆ ವೇದಾವತಿಯವರು, ನಾನು ವಿದ್ಯಾರ್ಥಿಗಳನ್ನು ಭೇಟಿಯಾಗಿ ವಿಚಾರಿಸಿದ್ದೇನೆ, ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ, ಶಿಕ್ಷಕರು ಥಳಿಸಿರುವ ಬಗ್ಗೆ ವಿಚಾರಿಸುತ್ತೇನೆ ಎಂದು ತಿಳಿಸಿದ್ದಾರೆ.

Also Read  ಮಂಗಳೂರು: ಡೊಂಗರಕೇರಿ ಶ್ರಿ ವೆಂಕಟರಮಣ ದೇವಸ್ಥಾನದಲ್ಲಿ 7 ದಿನಗಳ ಕಾಲ ಶ್ರೀಮದ್ ಬಾಗವತ ಸಪ್ತಾಹ

 

error: Content is protected !!
Scroll to Top