ನಿಯಂತ್ರಣ ತಪ್ಪಿ 50 ಅಡಿ ಆಳದ ಕಮರಿಗೆ ಉರುಳಿದ ಬಸ್ ➤ ಐವರು ಮೃತ್ಯು..!

(ನ್ಯೂಸ್ ಕಡಬ) newskadaba.com ಇಂದೋರ್, ಜೂ. 24. ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು 50 ಅಡಿ ಆಳದ ಕಮರಿಗೆ ಬಿದ್ದ ಘಟನೆ ಸಿಮ್ರೋಲ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವ್ ಘಾಟ್ ನಲ್ಲಿ ನಡೆದಿದೆ.


ಸುಮಾರು 50ರಿಂದ 60 ಪ್ರಯಾಣಿಕರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಪರಿಣಾಮ ಐವರು ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ. 10 ಮಂದಿ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

Scroll to Top