ಬಂಟ್ವಾಳ: ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 25. ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ.

ಮರ ಕೆಳಕ್ಕೆ ಉರುಳುತ್ತಿರುವುದನ್ನು ಮನಗಂಡ ಕಾರು ಚಾಲಕ ಕಾರನ್ನು ಹಿಂದಕ್ಕೆ ಚಲಾಯಿಸಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Also Read  ಆರ್ಥಿಕ ಸಮಸ್ಯೆಗಳು ಪರಿಹಾರವಾಗಲಿವೆ ಒಂದು ಕೆಲಸ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ

error: Content is protected !!
Scroll to Top