ಕೆಎಸ್ಸಾರ್ಟಿಸಿ ಬಸ್ – ಕಂಟೇನರ್ ಲಾರಿ ನಡುವೆ ಅಪಘಾತ ➤ ಐವರು ಗಂಭೀರ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.25. ಬಸ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶನಿವಾರದಂದು ಸಂಭವಿಸಿದೆ.







ಧರ್ಮಸ್ಥಳದಿಂದ ಹಾಸನ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೇನರ್ ನಡುವೆ ಗುಂಡ್ಯ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಕಂಟೇನರ್ ಚಾಲಕ, ಬಸ್ ಚಾಲಕ, ನಿರ್ವಾಹಕ, ಹಾಗೂ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.






 

 

error: Content is protected !!
Scroll to Top