ದ.ಕ ಜಿಲ್ಲೆಯಲ್ಲಿ ಇಂದು 2.7 ತೀವ್ರತೆಯ ಭೂಕಂಪನ ➤ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ದಕ್ಷಿಣಕನ್ನಡ, ಜೂ. 25. ಇಂದು ಬೆಳಗ್ಗೆ 9 ಗಂಟೆ 9 ನಿಮಿಷ 48 ಸೆಕೆಂಡ್ ಗಳ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವು ಗ್ರಾಮಗಳಲ್ಲಿ 3-4 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಗರ, ಸಂಪಾಜೆ, ಗೂನಡ್ಕ, ಮರ್ಕಂಜೆ, ತೊಡಿಕಾಣ, ಪೆರಂಜೆ ಸುತ್ತಮುತ್ತ ಭೂಕಂಪನದ ಅನುಭವವಾಗಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಹಲವೆಡೆ ವಿಚಿತ್ರ ಶಬ್ದದೊಂದಿಗೆ ಭೂಮಿ ಕಂಪಿಸಿರುವ ಬಗ್ಗೆಯೂ ಕೂಡಾ ಸಾರ್ವಜನಿಕರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕಲ್ಲುಗುಂಡಿ, ಸಂಪಾಜೆ, ಗೂನಡ್ಕ, ಅಡ್ತಲೆ, ಅರಂತೋಡು, ಅರಂಬೂರು ಮತ್ತಿತರ ಭಾಗಗಳಲ್ಲಿ ಗುಡುಗಿನ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

Also Read  ಸುಬ್ರಹ್ಮಣ್ಯ: ಚಂಪಾಷಷ್ಟಿ ಪ್ರಯುಕ್ತ ಮೂಲಮೃತ್ತಿಕಾ ಪ್ರಸಾದ ವಿತರಣೆ

error: Content is protected !!
Scroll to Top