ಶಿಕ್ಷಣ ಇಲಾಖೆಯ ಹೆಸರು ಬದಲಾಯಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 25. ರಾಜ್ಯ ಸರಕಾರವು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣ ಮಾಡಿ ಆದೇಶ ಹೊರಡಿಸಿದೆ.

 

ಈ ಕುರಿತು ಟ್ವೀಟ್‌ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯನ್ನು “ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ” ಎಂದು ಮರು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ರಲ್ಲಿ ತಿಳಿಸಿರುವ ಹಿನ್ನೆಲೆ ಈ ರೀತಿ ಮರುನಾಮಕರಣ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೆಚ್ಚಿನ ರಾಜ್ಯಗಳಲ್ಲಿ ‘ಶಾಲಾ ಶಿಕ್ಷಣ ಇಲಾಖೆ’ ಎನ್ನುವ ಪದನಾಮ ರೂಢಿಯಲ್ಲಿರುವುದರಿಂದ ರಾಜ್ಯದಲ್ಲಿಯೂ ಇದೇ ಮಾದರಿ ಅಳವಡಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸೂಚಿಸಿದ್ದರು ಎನ್ನಲಾಗಿದೆ.

Also Read  ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ ➤ ಜಿಲ್ಲಾಧಿಕಾರಿ ಆದೇಶ

error: Content is protected !!
Scroll to Top