ಫೋಕ್ಸೋ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 26. ಪೋಕ್ಸೋ ಪ್ರಕರಣದಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಲ್ಲೇರಿಯ ಮುನಾಸಿರ್(21) ಎಂದು ಗುರುತಿಸಲಾಗಿದೆ. ಈತ ಕೆಲವು ದಿನಗಳ ಹಿಂದೆ ಓರ್ವ ಅಪ್ರಾಪ್ತೆಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ನೆಪವೊಡ್ಡಿ ಉಪ್ಪಿನಂಗಡಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ಕುರಿತು ಈತನ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಉಪ್ಪಿನಂಗಡಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದು, ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಪುತ್ತೂರಿನ ರಾಮಕುಂಜದಲ್ಲಿ ಮೀನುಕೃಷಿಕರ ದಿನಾಚರಣೆ

error: Content is protected !!
Scroll to Top