(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27. ಮಂಗಳೂರು ಡಿಸಿಪಿ ಹರಿರಾಂ ಶಂಕರ್ ಅವರನ್ನು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರದಂದು ಆದೇಶ ಹೊರಡಿಸಿದೆ.
ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2017ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೇವೆಯಲ್ಲಿದ್ದ ಇವರು ದಕ್ಷ , ಪ್ರಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು.