SP ಕಛೇರಿ ಪುತ್ತೂರಿಗೆ ಸ್ಥಳಾಂತರಿಸುವ ಪ್ರಯತ್ನ ನಡೆಯುತ್ತಿದೆ ➤ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 27. ಮಂಗಳೂರಿನಲ್ಲಿರುವ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಭಾರೀ ಬೇಡಿಕೆ ಇರುವ ಹಿನ್ನೆಲೆ, ಪ್ರಯತ್ನಗಳು ನಡೆಯುತ್ತಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.


ಇವರು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರ ಆರೋಗ್ಯ ವಿಚಾರಿಸಲು ಬಂದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಮಂಗಳೂರಿನಲ್ಲಿರುವ ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಶಾಸಕರು ಭಾರೀ ಒತ್ತಡ ಹೇರುತ್ತಿದ್ದು, ಈ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದರು. ಉಪ್ಪಿನಂಗಡಿಯಲ್ಲಿ ನಡೆದ ಪತ್ರಕರ್ತರ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುವುದಾಗಿ ಭರವಸೆ ನೀಡಿದ ಅವರು ಈ ಕುರಿತು ಪೋಲೀಸ್ ಅಧಿಕಾರಿಗಳ ಜೊತೆ ಮಾತನಾಡುವುದಾಗಿಯೂ ತಿಳಿಸಿದರು.

Also Read  ಮತ್ತೇ ಕೋವಿಡ್ ಭೀತಿ   ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ         

error: Content is protected !!
Scroll to Top