ಕಡಬ: ಬಿಜೆಪಿ ಸರಕಾರ 8 ವರ್ಷ ಪೂರೈಸಿದ ಹಿನ್ನೆಲೆ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳ ಹೋರಾಟಗಾರರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 28. ಬಿಜೆಪಿ ಸುಳ್ಯ ಮಂಡಲ ವತಿಯಿಂದ ಕೇಂದ್ರದ ಮೋದಿ ನೇತೃತ್ವದ ಸರಕಾರ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಸೇವೆ, ಸುಶಾಸನ, ಬಡವರ ಕಲ್ಯಾಣ ಯೋಜನೆಯಡಿ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳ ಹೋರಾಟಗಾರರಿಗೆ ಗೌರವಾರ್ಪಣೆ ಕಾರ್ಯಕ್ರಮವು ನೂಜಿಬಾಳ್ತಿಲ ಕಲ್ಲುಗುಡ್ಡೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಮಳೇಲ ಶೇಖರ ಗೌಡ ಮತ್ತು ಜಯವರ್ಮ ಜೈನ್, ಸುಜೇತ ಜೈನ್ ದಂಪತಿಗಳಿಗೆ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಕೃಷ್ಣ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ, ಎಪಿಎಂಸಿ ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷೆ ಗಂಗಮ್ಮ ಸದಸ್ಯರಾದ ಇಮ್ಯಾನುವೆಲ್, ವಿನಯ ಮೊದಲಾದವರು ಉಪಸ್ಥಿತರಿದ್ದರು.

Also Read  ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್

error: Content is protected !!
Scroll to Top