ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಗೆ ಬೈಕ್ ಢಿಕ್ಕಿ- ಮೃತ್ಯು..! ➤ ಗುರುತು ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 28. ಇಲ್ಲಿನ ಆಟೋ ರಿಕ್ಷಾ ನಿಲ್ದಾಣದ ಬಳಿ ನಿಂತಿದ್ದ ಅಪರಿಚಿತ ವ್ಯಕ್ತಿಯೋರ್ವರಿಗೆ ಬುಲೆಟ್ ಬೈಕ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ತಡ ರಾತ್ರಿ ನಡೆದಿದೆ.


ಅಂದಾಜು 65 ವರ್ಷ ಆಸುಪಾಸಿನ ಅಪರಿಚಿತ ವ್ಯಕ್ತಿಯಾಗಿದ್ದು, ಗುರುತು ಪತ್ತೆಯಾಗದ ಹಿನ್ನೆಲೆ ವ್ಯಕ್ತಿಯ ಗುರುತು ಇರುವವರು ಪುತ್ತೂರು ಸಂಚಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Scroll to Top