ವಿಟ್ಲ: ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆ -ಪ್ರಕರಣ ➤ ಕುಡುಕ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 29. ಇಲ್ಲಿನ ಸಾರ್ವಜನಿಕ ಬಸ್ ‌ನಿಲ್ದಾಣದಲ್ಲಿ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಉಂಟಾದ ಘಟನೆ ಎಂದು ತಿಳಿದುಬಂದಿದೆ.


ಬದನಾಜೆ ಬಸ್ ನಿಲ್ದಾಣದ ಪಕ್ಕದಲ್ಲಿ ಹಾಲು ಸಂಗ್ರಹಣಾ ಕೇಂದ್ರವಿದ್ದು, ಅಲ್ಲಿಗೆ ಬಂದವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯು ಸಾರ್ವಜನಿಕ ವಲಯದಲ್ಲಿ ಭಾರೀ ಊಹಾಪೋಹಗಳಿಗೆ ಕಾರಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಂಡಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಅದರಂತೆ ಓರ್ವನನ್ನು ಬಂಧಿಸಿ ಮಾಹಿತಿ ಪಡೆದಿದ್ದಾರೆ. ನೆಲ್ಲಿಗುಡ್ಡೆ ಮೂಲದ ವ್ಯಕ್ತಿಯೋರ್ವ ಕುಡಿತದ ಮತ್ತಿನಲ್ಲಿ ಬದನಾಜೆ ಬಸ್ ನಿಲ್ದಾಣದಲ್ಲಿ ಬಿದ್ದಿದ್ದರಿಂದ ಆತನ ಮುಖ ಹಾಗೂ ಮೂಗಿನ ಭಾಗಕ್ಕೆ ಗಾಯವಾಗಿ ರಕ್ತ ಬಂದಿದೆ. ಈತ ಬೆಳಗ್ಗೆದ್ದು ರಕ್ತವನ್ನು ಕಂಡು ಅಲ್ಲಿಂದ ಎದ್ದು ವಿಟ್ಲ ಕಡೆಗೆ ತೆರಳಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ನಿಜಾಂಶ ಬಯಲಾಗಿದೆ. ಈ ಮೂಲಕ ಸಾರ್ವಜನಿಕರ ಆತಂಕಕ್ಕೆ ತೆರೆಯೆಳೆದಂತಾಗಿದೆ.

Also Read  ತಹಸೀಲ್ದಾರ್‌ ಗೆ ಒಂದೂವರೆ ಕೋಟಿ ದಂಡ ➤ 4 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

error: Content is protected !!
Scroll to Top