ಮಂಗಳೂರು: ಟೆಂಪೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿ..! ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 29. ಚಲಿಸುತ್ತಿದ್ದ ಟೆಂಪೋವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ರಸ್ತೆಯಲ್ಲಿ ನಡೆದಿದೆ.

ಮೃತಚಾಲಕನನ್ನು ಕೆಎಸ್.ರಾವ್ ನಗರ ವಿಜಯಪುರ ಕಾಲೊನಿ ನಿವಾಸಿ ಯಶವಂತರಾಯ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಭಗವಂತರಾಯ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸಕ್ಕೆಂದು ಟೆಂಪೋದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು, ಚಾಲಕ ಹಾಗೂ ಮತ್ತಿಬ್ಬರು ಕೂಲಿ ಕಾರ್ಮಿಕರು ಟೆಂಪೋದ ಒಳಗೆ ಸಿಲುಕಿ ಒದ್ದಾಡುತ್ತಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರಾದರೂ, ಚಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಫೆ. 5 ರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ನೋಂದಣಿ ➤ ರಣದೀಪ್ ಸುರ್ಜೇವಾಲಾ..!

error: Content is protected !!
Scroll to Top