(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 30. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತೋಟಕ್ಕೆ ಮಗುಚಿಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಅಲೆಟ್ಟಿ ಗ್ರಾಮದ ನಾರ್ಕೋಡಿನಲ್ಲಿ ಬುಧವಾರದಂದು ರಾತ್ರಿ ನಡೆದಿದೆ.
ಹೈದರಾಬಾದ್ ಮೂಲದ ಪ್ರವಾಸಿಗರು ಕನ್ಯಾಕುಮಾರಿ ಯಾತ್ರೆ ಮುಗಿಸಿ ಸುಳ್ಯ ರಸ್ತೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಕ್ಕದ ತೋಟಕ್ಕೆ ಉರುಳಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದು, ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.