ಶಿಶಿಲ: ವ್ಯಕ್ತಿಗಳಿಬ್ಬರ ನಡುವೆ ಮಾರಾಮಾರಿ ➤ ಓರ್ವನಿಗೆ ಗಾಯ



(ನ್ಯೂಸ್ ಕಡಬ) newskadaba.com ಶಿಶಿಲ, ಜೂ. 30. ಶಿಶಿಲದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಾಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಅವರಿಬ್ಬರ ನಡುವೆ ಮತ್ತೆ ಗಲಾಟೆ ನಡೆದು ಮಚ್ಚು ಬೀಸಿರುವ ಘಟನೆ ಬುಧವಾರದಂದು ಸಂಜೆ ನಡೆದಿದೆ.







ಗಾಯಾಗೊಂಡವರನ್ನು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಿರಣ ಎಂಬಾತ ಕಾದು ಕುಳಿತು ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದಾಗಿ ಪುರುಷೋತ್ತಮರ ಕುತ್ತಿಗೆ ಹಾಗೂ ಕಿವಿಯ ಭಾಗಕ್ಕೆ ಗಾಯಗಳಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top