ಮರ್ಕಂಜ: ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿ ಮಳೆಯ ನಡುವೆ ಧರಣಿ ➤ ಅಂಬೇಡ್ಕರ್ ರಕ್ಷಣಾ ವೇದಿಕೆ ಬೆಂಬಲ

(ನ್ಯೂಸ್ ಕಡಬ) newskadaba.com ಮರ್ಕಂಜ, ಜೂ. 30. ಮರ್ಕಂಜದಲ್ಲಿನ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಗ್ರಾಮಸ್ಥರಿಂದ ಧರಣಿ ಆರಂಭಗೊಂಡಿದೆ.


ಗಣಿಗಾರಿಕೆಯಿಂದ ಸ್ಥಳೀಯರಿಗೆ, ಧಾರ್ಮಿಕ ಕಟ್ಟಡಗಳಿಗೆ, ಶಾಲೆ ಹಾಗೂ ಜನವಸತಿ ಪ್ರದೇಶಕ್ಕೆ ಹಾನಿಯಾಗುತ್ತಿದ್ದು, ಆದ್ದರಿಂದ ತಕ್ಷಣವೇ ಗಣಿಗಾರಿಕೆ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮರ್ಕಂಜದ ಹಳೆ ವಿದ್ಯಾರ್ಥಿ ಸಂಘ, ಭಜನಾ ಮಂದಿರದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮಳೆಯನ್ನೂ ಲೆಕ್ಕಿಸದೆ ಧರಣಿಯಲ್ಲಿ ತೊಡಗಿದ್ದಾರೆ. ಮರ್ಕಂಜದ ಅಳವುಪಾರೆ ಗಣಿಗಾರಿಕೆಗೆ ಪಂಚಾಯತ್ ನ ಪರವಾನಗಿ ನವೀಕರಣವಾಗದಿದ್ದರೂ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಜನವಸತಿ ಪ್ರದೇಶ ಹಾಗೂ ಸಾರ್ವಜನಿಕ ಕಟ್ಟಡಗಳಿಗೆ ಹಾನಿಯಾಗುತ್ತಿದೆ ಎಂದು ಗ್ರಾಮಸ್ಥರು ಆಕ್ಷೇಪಿಸಿ ತಕ್ಷಣವೇ ಗಣಿಗಾರಿಕೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಗಣಿಗಾರಿಕೆ ಇಲಾಖಾ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಿ, ವರದಿ ಬರುವಲ್ಲಿಯವರೆಗೂ ಗಣಿ ಬಂದ್ ಮಾಡಲು ಆಗ್ರಹಿಸಿದ್ದಾರೆ.

 

error: Content is protected !!
Scroll to Top