ಬಂಟ್ವಾಳ: ಗೋಮಾಂಸ ಅಡ್ಡೆಗೆ ದಾಳಿ ➤ ಇಬ್ಬರು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 01. ದನಗಳನ್ನು ಕದ್ದೊಯ್ದು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಸ್ಥಳದಲ್ಲಿದ್ದ ಸಾವಿರಾರು ರೂ.ಮೌಲ್ಯದ ಮಾಂಸವನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ಗೋಳ್ತಮಜಲು ನಿವಾಸಿ ಮುಹಮ್ಮದ್ ಹಾಗೂ ಸಾದಿಕ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಎಂಬವರು ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರಿಂದ ಮಾಹಿತಿ ಲಭ್ಯವಾದ ಹಿನ್ನೆಲೆ ಎಸ್.ಐ ಅವಿನಾಶ್ ನೇತೃತ್ವದ ನಗರ ಠಾಣಾ ಪೊಲೀಸರ ತಂಡ ಇಂದು ಮುಂಜಾನೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

Also Read  ಪಂಜದಲ್ಲಿ ನೂತನ ಅಂಗಡಿ ಮಾಲಕರಿಂದ ಅಂಬುಲೆನ್ಸ್ ಗೆ ದೇಣಿಗೆ

error: Content is protected !!
Scroll to Top