ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ➤ ಯುವಕನ ವಿರುದ್ದ ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 01. ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಯುವಕನೋರ್ವನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) ಎಂದು ಗುರುತಿಸಲಾಗಿದೆ. ಈತನು ಬಾಲಕಿಗೆ ದೂರದ ಸಂಬಂಧಿಯಾಗಿದ್ದು, ಅವರಿಬ್ಬರು ಕೆಲ ಸಮಯದಿಂದ ಫೋನ್ ಮೂಲಕ ಮಾತನಾಡುತ್ತಿದ್ದರೆನ್ನಲಾಗಿದೆ. ಕೆಲ ತಿಂಗಳ ಹಿಂದೆ ಸಂದೀಪನು ಬಾಲಕಿಯ ದೊಡ್ಡಪ್ಪನ ಮನೆಯಲ್ಲಿ ಪೂಜೆಗೆ ಹೋಗಿದ್ದ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ನಂತರ ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಆಕೆಯನ್ನು ಜೂ.22ರಂದು ಸರ್ಕಾರಿ ಆಸ್ಪತ್ರೆಗೆ ಹೋಗಿ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಜೂ.28 ರಂದು ಪ್ರಕರಣ ದಾಖಲಿಸಿದ್ದಾರೆ.

Also Read  ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಹಿನ್ನೆಲೆ ➤ ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

error: Content is protected !!
Scroll to Top