ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಚೇಳು ಕಚ್ಚಿ ಬಾಲಕಿ ಮೃತ್ಯು..!



(ನ್ಯೂಸ್ ಕಡಬ) newskadaba.com ಛತ್ತೀಸ್ಗಢ, ಜು. 01. ಎಂಟು ವರ್ಷದ ಬಾಲಕಿಯೋರ್ವಳಿಗೆ ಚೇಳು ಕಚ್ಚಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ನಡೆದಿದೆ.








ಮೃತಪಟ್ಟ ಬಾಲಕಿಯನ್ನು 2ನೇ ತರಗತಿ ವಿದ್ಯಾರ್ಥಿನಿಯನ್ನು ದಿವ್ಯಾ ಮಾಂಡವಿ ಎಂದು ಗುರುತಿಸಲಾಗಿದೆ. ಈಕೆ ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಚೇಳು ಕಚ್ಚಿದ್ದು, ತಕ್ಷಣವೇ ಸಮೀಪದ ದಾಧಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ಬೆಮೆತಾರಾ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.






error: Content is protected !!
Scroll to Top