ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ (ವೇಲೆನ್ಸಿಯಾ ಮಂಗಳೂರು) ಹಾಗೂ ಬಾಲಕಿಯರ (ಚಿಲಿಂಬಿ, ದೇರಳಕಟ್ಟೆ, ಗುರುಕಂಬಳ, ಬೆಂಜನಪದವು ಹಾಗೂ ಕಡಬ) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅಲ್ಪಸಂಖ್ಯಾತ ಮೆಟ್ರಿಕ್ ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಇಲಾಖೆಯ ವೆಬ್‍ಸೈಟ್: https://sevasindhu.karnataka.gov.in/ ನಲ್ಲಿ ಅರ್ಜಿಯ ಜೊತೆ ದೃಢೀಕೃತ ದಾಖಲೆಗಳನ್ನು ಭರ್ತಿಮಾಡಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮಂಗಳೂರು ಇಲ್ಲಿಗೆ ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಮತ್ತು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು, ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲೂಕು ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ

error: Content is protected !!
Scroll to Top