ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 02. ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಬಿಸಿರೋಡು ಪೂಂಜಾಲಕಟ್ಟೆ ರಾ.ಹೆ. ಬಡಗುಂಡಿ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡವರನ್ನು ನಯನಾಡು ನಿವಾಸಿ ಬಾಪ್ಟಿಸ್ ಲೋಬೋ ಅವರ ಮಗ ರಾಕ್ ಲಿನ್ ಲೋಬೋ ಎಂದು ಗುರುತಿಸಲಾಗಿದೆ. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಂಜೇಶ್ವರ ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರು ಹಾಗೂ ರಿಟ್ಝ್ ಕಾರು ನಡುವೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಎರ್ಟಿಗಾ ಕಾರಿನಲ್ಲಿದ್ದ 12 ಮಂದಿ ಪ್ರಯಾಣಿಕರಿಗೂ ಗಾಯಗಳಾಗಿವೆ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..!

error: Content is protected !!
Scroll to Top