ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.11. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಬಂಟ್ವಾಳದಲ್ಲಿ ಬೃಹತ್ ಸಮಾವೇಶ ನಡೆಯಿತು.

ಈ ಸಂದರ್ಭದಲ್ಲಿ ಸಚಿವ ರಮಾನಾಥ ರೈ ವಿರುದ್ದ ಹರಿಹಾಯ್ದ ಶೋಭಾ ಕರಂದ್ಲಾಜೆ, ಬಂಟ್ವಾಳದಲ್ಲಿ ರಮಾನಾಥ ರೈಯವರು ಹಿಂದೂಗಳ ವಿರುದ್ಧ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಬಂಧನಕ್ಕೆ ರಮಾನಾಥ ರೈಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಲು ಅವರು ಮಾಡಿರುವ ತಪ್ಪೇನು ಎಂದು ಪ್ರಶ್ನಿಸಿದರು. ನಿಮಗೆ ತಾಕತ್ತು ಇದ್ದರೆ ಪ್ರಭಾಕರ್ ಭಟ್ ಅವರನ್ನು ಬಂಧಿಸಿ ಎಂದು ಶೋಭಾ ಕರಂದ್ಲಾಜೆ ರಮಾನಾಥ ರೈ ಅವರಿಗೆ ಸವಾಲು ಹಾಕಿದರು.

Also Read  ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ತಾಲೂಕು ಘಟಕ ಉದ್ಘಾಟನೆ ➤ ಮನೆಗೆ ದಾರಿ ಇಲ್ಲದೆ ಕಷ್ಟಪಡುತ್ತಿರುವ ಮರ್ಧಾಳದ ಸೈನಿಕ

ರಮಾನಾಥ ರೈ ಮುಸ್ಲಿಮರ ಓಲೈಕೆ ಮಾಡುತ್ತಿರುವುದರಿಂದಾಗಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳರನ್ನು ಕಳೆದುಕೊಳ್ಳುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ, ಮುಸ್ಲಿಮರಿಗೆ ಸುನ್ನತ್ ನಿಂದ ನೋವಾಗುತ್ತಿದ್ದು, ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮೂಢನಂಬಿಕೆ ವಿರೋಧಿ ಕಾಯಿದೆಯಲ್ಲಿ ಮುಸ್ಲಿಮರ ಸುನ್ನತನ್ನು ಸೇರಿಸಿ ಎಂದರಲ್ಲದೆ ನಿಮಗೆ ತಾಕತ್ ಇದ್ರೆ ಸುನ್ನತ್ ನ್ನು ನಿಷೇಧಿಸಿ ಎಂದು ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಉಡುಪಿಗೆ ಬಂದು ಶ್ರೀಕಷ್ಣ ಮಠಕ್ಕೆ ಭೇಟಿ ಮಾಡದ ಬಗ್ಗೆ ಮಾತನಾಡಿದ ಅವರು ಸಿಎಂ ಅವರ ಕನಸಲ್ಲಿ ಶ್ರೀ ಕೃಷ್ಣ ಬಂದು ನನ್ನ ಕ್ಷೇತ್ರ ಕ್ಕೆ ಬಂದು ಅಪವಿತ್ರ ಮಾಡಬೇಡ ಎಂದು ಹೇಳಿರಬೇಕು ಹೀಗಾಗಿ ಅವರು ಶ್ರೀಕೃಷ್ಣ ಮಠಕ್ಕೆ ಕಾಲಿಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.

Also Read  ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ...

error: Content is protected !!
Scroll to Top