ನಾಳೆ (ಜು. 05) ಕಡಬ ತಾಲೂಕು ಕಛೇರಿಯಲ್ಲಿ ಜಿಲ್ಲಾಧಿಕಾರಿ ಲಭ್ಯ ➤ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಇಲ್ಲಿನ ತಾಲೂಕು ಕಚೇರಿಯಲ್ಲಿ ನಾಳೆ (ಜು.5) ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಲಭ್ಯವಿರಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಜಿಲ್ಲಾಧಿಕಾರಿಯವರು ಪ್ರತೀ ತಿಂಗಳ ಮಂಗಳವಾರ ತಾಲೂಕು ಕಚೇರಿಯಲ್ಲಿ ಲಭ್ಯರಿದ್ದು, ಜನಸಾಮಾನ್ಯರ ಕುಂದುಕೊರತೆಗಳನ್ನು ಬಗೆಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.

Also Read  ರಾಜ್ಯದಲ್ಲಿ ಮತ್ತೆ 6 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆ

error: Content is protected !!
Scroll to Top