ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಲಕ್ಷಾಂತರ ರೂ. ಮೌಲ್ಯದ ಚಿನ್ನ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಚಿನ್ನ ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

ಕಾಸರಗೋಡು ಮೂಲದ ವ್ಯಕ್ತಿಯೋರ್ವ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಈತನಿಂದ 24 ಕ್ಯಾರೆಟ್ ನ 602.200 ಗ್ರಾಂ ತೂಕದ 31,31,440 ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಚಿನ್ನವನ್ನು ಹಾಲಿನ ಹುಡಿಯ ಪ್ಯಾಕೇಟ್ ನಲ್ಲಿರಿಸಿ ಸಾಗಾಟಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿ ಹಾಗೂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

error: Content is protected !!
Scroll to Top