ಅಕ್ರಮ ಗೋಸಾಗಾಟ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 04. ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಿನಿಮಾ ಶೈಲಿಯಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಕಾರ್ಕಳದಲ್ಲಿ ನಡೆದಿದೆ.


ಬಂಧಿತರನ್ನು ಶಕೀಲ್ ಅಹಮದ್ ಹಾಗೂ ಸಹೋದರ ಅಖಿಲ್ ಅಹಮದ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ದನಗಳನ್ನು ಕದಿಯುತ್ತಿದ್ದ ಇವರು, ರಸ್ತೆ ಬದಿಯಲ್ಲಿ ಮಲಗಿದ್ದ ಎರಡು ಗೋವುಗಳನ್ನು ಕಳವುಮಾಡಿ ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಸಾಗಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಸಂತ್ರಸ್ತರಿಗೆ ನ್ಯಾಯ ಕೊಡಿ - ಹಾಜಿ ಸೈಯದ್ ಮೀರಾ ಸಾಹೇಬ್

error: Content is protected !!
Scroll to Top