ಬಿಸಿರೋಡು: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿದು ಯುವಕನ ಕೊಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 05. ಕ್ಷುಲ್ಲಕ ವಿಚಾರಕ್ಕೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು

 

ಕೊಲೆಗೀಡಾದವರನ್ನು ಬಿಸಿರೋಡ್ ಶಾಂತಿ ಅಂಗಡಿ ನಿವಾಸಿ ಆಸಿಫ್ ಎಂದು ಗುರುತಿಸಲಾಗಿದೆ. ಬಿಸಿರೋಡಿನ‌ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಷಯವಾಗಿ ಇತ್ತಂಡಗಳ ನಡುವೆ ವಾಗ್ವಾದ ನಡೆದು, ಬಳಿಕ‌ ಜಗಳ ತಾರಕಕ್ಕೇರಿ, ಆಸಿಫ್ ಎಂಬಾತನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಬಿಸಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  Breaking news ಬಂಟ್ವಾಳದಲ್ಲಿ ಮತ್ತೊಂದು ಕೊರೋನ ದೃಢ: 47  ವರ್ಷದ ಮಹಿಳೆಗೆ ತಗುಲಿದ ಸೋಂಕು

error: Content is protected !!
Scroll to Top