ಬೆಳ್ತಂಗಡಿ: ಗಂಡನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ಪತ್ನಿ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಪತ್ನಿಯೋರ್ವಳು ಮಲಗಿದ್ದ ಗಂಡನನ್ನು ಕತ್ತಿಯಿಂದ ಕಡಿದು ಕೊಂದ ಘಟನೆ ನಾವೂರು ಗ್ರಾಮದ ಅಬ್ಬನಕೆರೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.


ಕೊಲೆಯಾದವರನ್ನು ಪೊಟ್ಟಸ್ ಬೇಬಿ (55) ಎಂದು ಗುರುತಿಸಲಾಗಿದೆ. ಈತನ ಪತ್ನಿ ನಲ್ಲಮ್ಮ(50) ಎಂಬಾಕೆ ಕೊಲೆ ಮಾಡಿದ್ದಾರೆ‌. ದಂಪತಿಗೆ ಒಬ್ಬ ಪುತ್ರಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಓರ್ವ ಮಗ ಉಪ್ಪಿನಂಗಡಿಯಲ್ಲಿ ಸ್ವಂತ ಉದ್ಯೋಗ ಮಾಡುತ್ತಿದ್ದು, ಇನ್ನೋರ್ವ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಮಗಳನ್ನು ಮದುವೆ ಮಾಡಿಕೊಡಲಾಗಿದೆ. ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.

Scroll to Top