(ನ್ಯೂಸ್ ಕಡಬ) newskadaba.com ಸಂಪಾಜೆ, ಜು. 05. ಕೇಂದ್ರ ಸರಕಾರದ ಭೂಕಂಪನ ಇಲಾಖೆಯ ಮುಖ್ಯಸ್ಥರಾದ ಅಝಾದ್ ಅಹಮದ್ ಭಟ್, ಸೆಂಥಿಲ್, ಮಂಗಳೂರು ವಿಭಾಗದ ಭೂಗರ್ಭ ಇಲಾಖೆಯ ಮಹದೇವ್, ತಹಶೀಲ್ದಾರ್ ಅನಿತಾಲಕ್ಷ್ಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಮ್. ಶಹೀದ್ ತೆಕ್ಕಿಲ್, ಪಂಚಾಯತ್ ಸದಸ್ಯ ಎಸ್. ಕೆ. ಹನೀಫ್ ಸಂಪಾಜೆ, ಕಂದಾಯ ನಿರೀಕ್ಷಕರಾದ ಕೊರಗಪ್ಪ ಹೆಗ್ಡೆ, ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಕಾಂಗ್ರೆಸ್ ನಾಯಕ ರಹೀಮ್ ಬೀಜದಕಟ್ಟೆ, ಅಬ್ದುಲ್ ಖಾದರ್ ಮೊಟ್ಟೆಂಗಾರ್, ನಾರಾಯಣ ತಾಲೂಕು ಕಚೇರಿ, ಸಹಿತ ಇನ್ನಿತರ ಸರಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.
ಭೂಕಂಪನ ಪೀಡಿತ ಪ್ರದೇಶಕ್ಕೆ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲನೆ ಮಾಡಿ ಸ್ಥಳೀಯರಿಂದ ಮತ್ತು ಪಂಚಾಯತ್ ಮಾಜಿ ಸದಸ್ಯ ನಾಗೇಶ್ ಹಾಗೂ ಪಂಚಾಯತ್ ಸದಸ್ಯ ಅಬುಸಾಲಿ ಗೂನಡ್ಕರಿಂದ ಮಾಹಿತಿಯನ್ನು ತಿಳಿದುಕೊಂಡರು.