ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದ ಲಾರಿ ➤ ಸವಾರ ದುರ್ಮರಣ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಜು. 05. ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್‌ ನಲ್ಲಿ ಇಂದು ನಡೆದಿದೆ.

ಮೃತ ದ್ವಿಚಕ್ರ ವಾಹನ ಸವಾರನನ್ನು ಸಂಶುದ್ದೀನ್‌ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದಿದ್ದು, ಪರಿಣಾಮ ಸವಾರ ಸಂಶುದ್ದೀನ್‌ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Scroll to Top