ಕಡಬ ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜು. 05. ಸರಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಕಡಬ ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ಒಂದೆಡೆ ಮಳೆ, ಇನ್ನೊಂದೆಡೆ ಕಛೇರಿಯ ಎದುರು ಸಾರ್ವಜನಿಕರು ಅರ್ಜಿ ಹಿಡಿದುಕೊಂಡು ನಿಂತು ಬಿಟ್ಟಿದ್ದಾರೆ. ಜಿಲ್ಲಾಧಿಕಾರಿ ತಹಶೀಲ್ದಾರ್ ಅವರ ಕಛೇರಿಯ ಒಳಗಡೆ ಜನರ ಸಮಸ್ಯೆ ಆಲಿಸಿ ಪರಿಹಾರ ನೀಡುತ್ತಿದ್ದಾರೆ. ಇಂತಹ ಉತ್ತಮ ಕಾರ್ಯಕ್ರಮ. ಆದರೆ ಇದನ್ನು ಒಂದು ಸಭಾಭವನ ಅಥವಾ ವಿಶಾಲ ಕೊಠಡಿಯಲ್ಲಿ ಮಾಡಿದ್ದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತಿತ್ತು. ಇನ್ನಾದರೂ ತಾಲೂಕು ಆಡಳಿತ ಎಚ್ಚೆತ್ತೊಳ್ಳಲಿ ಎಂಬುದು ಸಾರ್ವಜನಿಕರ ಅಭಿಪ್ರಾಯ.

Also Read  ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಒದಗಿಸಿಕೊಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

error: Content is protected !!
Scroll to Top