ಕೊಂಬಾರು: ಕಾಡಾನೆ ದಾಳಿ- ಕೃಷಿ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಜು. 05. ಕೃಷಿ ತೋಟಕ್ಕೆ ಕಾಡಾನೆ ಲಗ್ಗೆಯಿಟ್ಟು ಕೃಷಿ ಹಾನಿ ಮಾಡಿದ ಘಟನೆ ಕೊಂಬಾರು ಗ್ರಾಮದಲ್ಲಿ ನಡೆದಿದೆ.


ಎರಡು ದಿನಗಳ ಹಿಂದೆ ಕೊಂಬಾರು ಗ್ರಾಮದ ಬೊಟ್ಟಡ್ಕದಲ್ಲಿ ತಿಪ್ಪ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಯು ತೆಂಗು,ಬಾಳೆ ಗಿಡಗಳನ್ನು ಪುಡಿಗೈದಿದೆ. ಈ ಭಾಗದಲ್ಲಿ ಕಾಡಾನೆಗಳ ಪ್ರತಿನಿತ್ಯ ಓಡಾಟ ನಡೆಸುತ್ತಿದ್ದು, ಜನರು ಭಯದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

error: Content is protected !!
Scroll to Top