ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜು. 05. ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿಯವರನ್ನು ಹತ್ಯೆಗೈದು ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಹಂತಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.


ಬಂಧಿತ ಹಂತಕರನ್ನು ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಕಾರಿನಲ್ಲಿ ಬೆಳಗಾವಿ ಕಡೆಗೆ ಹೋಗುತ್ತಿದ್ದ ಖಚಿತ ಮಾಹಿತಿಯನ್ನು ಪಡೆದ ಇನ್ಸ್ ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತನಿಖಾ ತಂಡವು ಇಬ್ಬರನ್ನು ವಶಕ್ಕೆ ಪಡೆದು ಕರೆತರುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ ಹುಬ್ಬಳ್ಳಿಯ ಖಾಸಗಿ ಹೊಟೇಲ್‌ ನಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಹಂತಕರು ಚಂದ್ರಶೇಖರ ಗುರೂಜಿಯನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದಿದರು. ಆರೋಪಿಗಳ ಬಂಧನಕ್ಕೆ 5 ವಿಶೇಷ ತಂಡವನ್ನು ರಚಿಸಲಾಗಿತ್ತು.

Also Read  Breaking | ಕಡಬ: ನಾಯಿಯನ್ನು ಅಟ್ಟಿಸಿಕೊಂಡು ಶೌಚಾಲಯಕ್ಕೆ ನುಗ್ಗಿದ ಚಿರತೆ

error: Content is protected !!
Scroll to Top