ಗುಂಡ್ಯ: ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ



(ನ್ಯೂಸ್ ಕಡಬ) newskadaba.com ಗುಂಡ್ಯ, ಜು. 06. ಕಾರು ಮತ್ತು ಬಸ್ಸು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಚಾಲಕ ಹಾಗೂ ಮಗುವಿಗೆ ಗಾಯಗಳಾದ ಘಟನೆ ರಾ ಹೆ. 75ರ ಗುಂಡ್ಯ ಸಮೀಪದ ಬರ್ಚಿನ ಹಳ್ಳ ಎಂಬಲ್ಲಿ ನಡೆದಿದೆ.







ಗಾಯಗೊಂಡವರನ್ನು ಇಕ್ಬಾಲ್ ಹಾಗೂ ನಿಹಾಲ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿಗೆ ಹಾಸನದಿಂದ ಮಂಗಳೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಐದು ಪ್ರಯಾಣಿಕರಿದ್ದು ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top