ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಮೃತದೇಹ ಉಳ್ಳಾಲದಲ್ಲಿ ಪತ್ತೆ..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 06. ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹವು ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರದಂದು ಪತ್ತೆಯಾಗಿದೆ.

ಮೃತ ಯುವಕನನ್ನು ಅಶ್ವಿತ್(19) ಎಂದು ಗುರುತಿಸಲಾಗಿದೆ. ಈತ ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವಿನ ತೊಟ್ಟಿಲು ತೂಗುವ ಸಮಾರಂಭದಲ್ಲಿ ಪಾಲ್ಗೊಂಡು, ಬಳಿಕ ಹರ್ಷ ಎಂಬಾತನೊಂದಿಗೆ ಸಮೀಪದ ನೇತ್ರಾವತಿ ನದಿಗೆ ಈಜಲು ತೆರಳಿದ್ದು, ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಕೂಡಲೇ ಜತೆಯಲ್ಲಿದ್ದ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.‌ ಸತತ ಮೂರು ದಿನಗಳಿಂದ ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ನಡೆಸಲಾಗಿದ್ದು, ಇಂದು ಯುವಕನ ಮೃತದೇಹ ಪತ್ತೆಯಾಗಿದೆ.

Also Read  ಬಿಜೆಪಿ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳ ಸಭೆ

error: Content is protected !!
Scroll to Top