(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 06. ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗಳು ಡಿಎಲ್ ಪಡೆಯಲು ಅನರ್ಹರಾಗಿರುವುದರಿಂದ ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಹೇಳಿದ್ದಾರೆ. ಇನ್ನು ಬೆಂಗಳೂರು ನಗರದಲ್ಲಿ ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಸಿಗುತ್ತಿದ್ದು, ಈಗಾಗಲೇ ಅದರ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. ಜೂನ್ ತಿಂಗಳಲ್ಲಿ 22 ದ್ವಿಚಕ್ರ ವಾಹನ ಸವಾರರು ಕುಡಿತದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದುದರಿಂದ ಯಾರೂ ಮದ್ಯ ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.