ದ.ಕ ಜಿಲ್ಲೆಯಾದ್ಯಂತ ನಾಳೆ ಜು.07 ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 06. ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ನಾಳೆಯೂ ( ಜುಲೈ 7) ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಗುರುವಾರ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Also Read  ಏನೆಕಲ್ : ಜೀಪು - ಬೈಕ್ ಪರಸ್ಪರ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

error: Content is protected !!
Scroll to Top