ಸುಳ್ಯ: ಭೂಕಂಪನದಿಂದ ಹಾನಿಗೀಡಾದ ಮನೆಗೆ ವಿವಿಧ ಇಲಾಖಾ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 07. ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಎಂಬವರ ಮನೆಗೆ ವಿವಿಧ ಇಲಾಖೆಗಳ ಸಚಿವರು ಗುರುವಾರ ಭೇಟಿ ನೀಡಿ 45 ಸಾವಿರ ರೂ.ಗಳ ಚೆಕ್ ವಿತರಿಸಿದರು. ಅಲ್ಲದೇ ಇದೇ ಸಂದರ್ಭ 5 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸುವ ಭರವಸೆಯನ್ನೂ ಕೂಡಾ ನೀಡಿದ್ದಾರೆ.


ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಭೇಟಿ ನೀಡಿ ಚೆಕ್ ಹಸ್ತಾಂತರ ಮಾಡಿದರು.

Also Read  ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ

error: Content is protected !!
Scroll to Top