ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ರೈಡ್ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 07. ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಪಿಎಸ್ ಐ ಬೇಬಿ ಓಲೇಕರ್ ಎಂದು ಗುರುತಿಸಲಾಗಿದೆ. ಇವರು ಗಿರೀಶ್ ಎಂಬವರ ಬಳಿ ಹೊರಮಾವು ಸಮೀಪದ ಜಮೀನು ಕೇಸ್ ಬಗ್ಗೆ 3 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಾಗೆಯೇ ಗಿರೀಶ್ ಎಂಬವರಿಂದ ಲಂಚ ಪಡೆಯುತ್ತಿದ್ದಾಗಲೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ತಕ್ಷಣ ಪಿಎಸ್ ಐ ಬೇಬಿ ಓಲೆಕರ್ ಅವರನ್ನು ರೆಡ್ ಹ್ಯಾಂಡ್ ಆಗಿ ಸೆರೆಹಿಡಿದಿದ್ದಾರೆ.

Also Read  ಇಂದಿನ (ಜ.05) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್

error: Content is protected !!
Scroll to Top