ಮುಂದುವರಿದ ವರುಣನ ಆರ್ಭಟ ➤ ಕರಾವಳಿಯಲ್ಲಿ ಎರಡು ದಿನಗಳ ಕಾಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಶುಕ್ರವಾರ ಹಾಗೂ ಶನಿವಾರ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Also Read  16 ವರ್ಷಗಳ ಹಿಂದೆ ಮನೆಯಿಂದ ಚಿನ್ನಾಭರಣ ಕದ್ದೊಯ್ದ ಪ್ರಕರಣ ➤ ಆರೋಪಿಗೆ 9 ವರ್ಷ ಜೈಲು ಶಿಕ್ಷೆ

 

 

error: Content is protected !!
Scroll to Top